ತಾಜಾಸುದ್ದಿ

ಜೂನ್ 27

ವಿಧಾನ ಸೌಧ (ಬೆಂಗಳೂರು): ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟನೆಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಜೂನ್ 25

ಹಾಸನ: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನ ನಗರದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ( ಗಾಂಧಿ ಭವನಕ್ಕೆ ಶಂಕುಸ್ಥಾಪನೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ ನಿಲ್ದಾಣ ಉದ್ಘಾಟನೆ, ಹಾಸನಾಂಭ ಭವನ ಶಿಲಾನ್ಯಾಸ ಮತ್ತು ಕನಕ ಭವನ ಲೋಕಾರ್ಪಣೆ ಗೆ) ಚಾಲನೆ ನೀಡಿದರು.

ಜೂನ್ 25

ಹಾಸನ: ಹಾಸನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಸಾರಿಗೆ ಸಂಚಾರಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿಸಿದರು,ನಂತರ ಹಾಸನ ಕ್ರೀಡಾಂಗಣದಲ್ಲಿ ಏರ್ಪಾಡಾಗಿರುವ ಸಾರ್ವಜನಿಕ ಕಾರ್ಯಕ್ರಮಕ್ಕೆ ಸಾರಿಗೆ ಬಸ್ ನಲ್ಲಿ ತೆರಳಿದರು.

ಜೂನ್ 25

ಬೆಂಗಳೂರು: ಬೆಂಗಳೂರಿನ ರಾಜಾಜಿ ನಗರದ ಹೋಲಿಸ್ಟಿಕ್ ಹೆಲ್ತ್ ಸೆಂಟರ್ ನಲ್ಲಿ ಆರೋಗ್ಯ ಮಂದಿರ ಟ್ರಸ್ಟ್ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡರು.