ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಜನತಾ ದರ್ಶನ

ಮುಖ್ಯಮಂತ್ರಿ ಅವರು ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು

know_the_cm

ವಿಧಾನಸೌಧ (ಬೆಂಗಳೂರು), ಮೇ 27, 2019

-ಕೆ.ಆರ್. ನಗರದ ರಾಧಾ, ರಾಜಶ್ರೀ, ಮಂಜುಳಾ ಎಸ್. ಹಾಗೂ ವೀಣಾ ಅವರು ಹೆಚ್ಚುವರಿ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಮರು ಕೌನ್ಸಿಲಿಂಗ್ ಮಾಡುವಂತೆ ಮನವಿ ಮಾಡಿದರು. ಈ ವಿಷಯವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

know_the_cm

-ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹಾರಕಬಾವಿ ಗ್ರಾಮದಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಸುಮಂಗಲಾ ಅವರಿಗೆ ಎರಡು ಪುಟ್ಟ ಮಕ್ಕಳಿದ್ದು ಗಂಡ ಅಪಘಾತದಲ್ಲಿ ಮೃತರಾಗಿದ್ದಾರೆ. ಜೀವನೋಪಾಯಕ್ಕಾಗಿ ಅತಿಥಿ ಶಿಕ್ಷಕಿಯ ಕರ್ತವ್ಯವನ್ನು ಮುಂದುವರೆಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.