ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಬೆಂಗಳೂರು ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ

know_the_cm

ಬೆಂಗಳೂರು, ಅಕ್ಟೋಬರ್ 04, 2018

-ಬೆಂಗಳೂರು ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

-ಬೆಂಗಳೂರು ಬಿಬಿಎಂಪಿ ಉಪ ‌ಮೇಯರ್ ರಮೀಳಾ ಉಮಾಶಂಕರ್‌ ಅವರ ನಿಧನದ ಸುದ್ದಿ ತಿಳಿದು ದಿಗ್ಭ್ರಮೆಯಾಗಿದೆ.

-ನಿನ್ನೆಯಷ್ಟೆ ಅವರು 'ನಮ್ಮ‌ ಮೆಟ್ರೋ' ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಭಾಗವಹಿಸಿದ್ದರು.

-ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಈಗ ಅವರು ನಮ್ಮೊಂದಿಗಿಲ್ಲ ಎಂಬುದು ದುಃಖದ ಸಂಗತಿಯಾಗಿದೆ.

-ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅಗಲಿಕೆಯ ದುಃಖವನ್ನು ಭರಿಸುವ ಸ್ಥೈರ್ಯ ಅವರ ಕುಟುಂಬಕ್ಕೆ ಸಿಗಲಿ ಎಂದು‌ ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.