ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಪಂಜಾಬ್ ರೈಲು ದುರಂತ: ಮುಖ್ಯಮಂತ್ರಿ ಸಂತಾಪ

ಮೈಸೂರು, ಅಕ್ಟೋಬರ್ 19, 2018

-ಪಂಜಾಬ್ ನಲ್ಲಿ ರಾವಣ ಪ್ರತಿಕೃತಿ ದಹನದ ವೇಳೆ ಜರುಗಿದ ಘೋರ ರೈಲು ದುರಂತಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

-ಸಂಭ್ರಮ ಆಚರಣೆಯಲ್ಲಿದ್ದ ಜನರ ಮೇಲೆ ರೈಲು ಹರಿದ ಪರಿಣಾಮ ಹಲವಾರು ಮಂದಿ ಸಾವಿಗೀಡಾಗಿದ್ದರೆ.

-ಇದು ನನಗೆ ತೀವ್ರ ಆಘಾತವನ್ನುಂಟುಮಾಡಿದೆ. ಈ ಘಟನೆಯಿಂದ ನಾನು ನೊಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ.

-ಈ ದುರಂತದಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ನನ್ನ ಸಂತಾಪಗಳು ಹಾಗೂ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.

-ಸಾವಿಗೀಡಾದವರ ಕುಟುಂಬಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ