ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಗದುಗಿನ ತೋಂಟದಾರ್ಯ ಮಠದ ಶ್ರೀ ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು, ಅಕ್ಟೋಬರ್ 20, 2018

-ಜನರ ಸ್ವಾಮೀಜಿಯೆಂದೇ ಖ್ಯಾತಿ ಪಡೆದ ಗದುಗಿನ ತೋಂಟದಾರ್ಯ ಮಠದ ಶ್ರೀ ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ದೇಹಾಂತ್ಯಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದ ಪೋಷಕರಾಗಿದ್ದ ಅವರು ಸ್ವತಃ ಸಾಹಿತಿಯೂ ಆಗಿದ್ದರು. ಪ್ರಗತಿಪರ, ನೇರ ನಿಲುವುಗಳಿಂದ ಅಪಾರ ಭಕ್ತ ಸಮೂಹವನ್ನು ಹೊಂದಿದ್ದರು.

-ಅವರು ಮೌಢ್ಯ ವಿರೋಧಿ, ಪರಿಸರ ಕಾಳಜಿ ಮತ್ತಿತರ ಹಲವು ಜನಪರ ಹೋರಾಟಗಳಲ್ಲಿಯೂ ಸಕ್ರಿಯರಾಗಿದ್ದರು.

-ಎಲ್ಲ ವರ್ಗಗಳ ಭಕ್ತಸಮೂಹವನ್ನು ಹೊಂದಿದ್ದ ಅವರು ಜನರ ಸ್ವಾಮೀಜಿಯಾಗಿದ್ದರು ಎಂದು ಅವರು ಸ್ಮರಿಸಿದ್ದಾರೆ.

-ಭಗವಂತನು ಅವರಿಗೆ ಮೋಕ್ಷ ದಯಪಾಲಿಸಲಿ ಹಾಗೂ ಮಠದ ಭಕ್ತಾದಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

-“ನನ್ನ ಜನತಾ ದರ್ಶನ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ಪ್ರೋತ್ಸಾಹಿಸಿದವರು ಅವರು.. ಅಧಿಕಾರದಲ್ಲಿ ಇರಲಿ, ಬಿಡಲಿ, ಈ ಕಾರ್ಯಕ್ರಮ ಮುಂದುವರಿಸುವಂತೆ ಅವರು ಅಂದು ಸಾರ್ವಜನಿಕ ವೇದಿಕೆಗಳಲ್ಲಿ ಆಡಿದ ಪ್ರೋತ್ಸಾಹದ ನುಡಿಗಳು ನನಗೆ ಪ್ರೇರಣೆ.ಅವರ ಮಾರ್ಗದರ್ಶನದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯವನ್ನು ಮುಂದುವರೆಸುವ ಮೂಲಕ ಅವರಿಗೆ ಗೌರವ ಸಲ್ಲಿಸಬಯಸುವೆ”ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.