ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಹಿರಿಯ ಪತ್ರಕರ್ತ ವೈ.ಎನ್. ಜೋಷಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು, ಅಕ್ಟೋಬರ್ 27, 2018

-ಹಿರಿಯ ಪತ್ರಕರ್ತ ವೈ.ಎನ್. ಜೋಷಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಪತ್ರಿಕಾ ವೃತ್ತಿಯಲ್ಲಿ ವೃತ್ತಿಧರ್ಮಕ್ಕೆ ಅತ್ಯಂತ ಪ್ರಾಮುಖ್ಯ ನೀಡುತ್ತಿದ್ದ ಅವರು ಕಿರಿಯರಿಗೆ ಮಾರ್ಗದರ್ಶಕರಾಗಿದ್ದರು. ಇವರ ನಿಧನದಿಂದ ಪತ್ರಿಕೋದ್ಯಮ ಕ್ಷೇತ್ರದ ಹಿರಿಯ ಪೀಳಿಗೆಯ ಕೊಂಡಿಯೊಂದು ಕಳಚಿದಂತಾಗಿದೆ.

-ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.