ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಮಾಜಿ ಶಾಸಕ ಎಂ.ಪಿ. ರವೀಂದ್ರ ನಿಧಾನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು, ನವೆಂಬರ್ 03, 2018

-ಮಾಜಿ ಶಾಸಕ ಎಂ.ಪಿ. ರವೀಂದ್ರ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ರವೀಂದ್ರ ಅವರು ವೈಯಕ್ತಿಕವಾಗಿ ನನ್ನ ಉತ್ತಮ ಸ್ನೇಹಿತರು. ಸಮಾಜದ ಬಗ್ಗೆ ಕಳಕಳಿ ಹೊಂದಿದ್ದರು.

-ಇವರ ನಿಧನದಿಂದ ಒಬ್ಬ ಉತ್ತಮ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.