ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಬೀಳಗಿಯ ಮಾಜಿ ಶಾಸಕ ಬಾಬುರೆಡ್ಡಿ ತುಂಗಳ ನಿಧನಕ್ಕೆ ಮುಖ್ಯಮಂತ್ರಿ ಶೋಕ

ಬೆಂಗಳೂರು, ನವೆಂಬರ್ 09, 2018

-ಬೀಳಗಿ ಕ್ಷೇತ್ರದ ಮಾಜಿ ಶಾಸಕ ಬಾಬುರೆಡ್ಡಿ ತುಂಗಳ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಬಾಬುರೆಡ್ಡಿ ತುಂಗಳ ಆವರು ರೈತರ ಬಗ್ಗೆ ಅಪಾರ ಕಾಳಜಿಯುಳ್ಳವರಾಗಿದ್ದರು. ಅವರ ಪರವಾಗಿ ಅನೇಕ ಹೋರಾಟಗಳನ್ನು ಸಂಘಟಿಸಿದ್ದರು. ಬಾಬುರೆಡ್ಡಿ ಅವರ ನಿಧನದಿಂದ ಜನಪರ ಹೋರಾಟಗಾರರೊಬ್ಬರನ್ನು ಕಳೆದುಕೊಂಡಿದ್ದೇವೆ.

-ಅವರ ಕುಟುಂಬಕ್ಕೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಮುಖ್ಯಮಂತ್ರಿಗಳು ಸಂತಾಪದಲ್ಲಿ ತಿಳಿಸಿದ್ದಾರೆ.