ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಖ್ಯಾತ ವಿಚಾರವಾದಿ, ಸಾಹಿತಿ ಜ.ಹೊ. ನಾರಾಯಣ ಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ

ಬೆಂಗಳೂರು, ನವೆಂಬರ್ 09, 2018

-ಖ್ಯಾತ ವಿಚಾರವಾದಿ, ಸಾಹಿತಿ ಜ.ಹೊ. ನಾರಾಯಣ ಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

-ಕುವೆಂಪು, ವಿವೇಕಾನಂದರ ಕುರಿತು ಅಧಿಕಾರಯುತವಾಗಿ ಮಾತನಾಡಬಲ್ಲವರಾಗಿದ್ದ ಜಹೊನಾ ಅವರು ಜನಪರ ಹೋರಾಟಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎಂದು ಮುಖ್ಯಮಂತ್ರಿ ಗಳು ಸ್ಮರಿಸಿಕೊಂಡಿದ್ದಾರೆ.

-ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಹಾಗೂ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬದವರಿಗೆ ನೀಡಲಿ ಎಂದು ಮುಖ್ಯಮಂತ್ರಿಯವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.