ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಟಿಪ್ಪು ಸುಲ್ತಾನ ಜಯಂತಿ: ಮುಖ್ಯಮಂತ್ರಿಗಳ ಶುಭಾಶಯ

ಬೆಂಗಳೂರು, ನವೆಂಬರ್ 10, 2018

-ಹಜರತ್ ಟಿಪ್ಪು ಸುಲ್ತಾನ ಜಯಂತಿಯನ್ನು ಸರ್ಕಾರ ಇಂದು ರಾಜ್ಯಾದ್ಯಂತ ಆಚರಿಸುತ್ತಿದೆ.

-ಟಿಪ್ಪು ಸುಲ್ತಾನರ ಆಡಳಿತ ಸುಧಾರಣಾ ಕ್ರಮಗಳು, ಪ್ರಯೋಗಶೀಲತೆಯ ಗುಣಗಳು ಅನುಕರಣೀಯ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

-ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ.

-ಮೂಢನಂಬಿಕೆಯ ವಿರೋಧಿಯಾದ ನಾನು ಅಧಿಕಾರ ಕಳೆದುಕೊಳ್ಳುವ ಭೀತಿಯಿಂದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎನ್ನುವುದು ಸತ್ಯಕ್ಕೆ ದೂರವಾದುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

-ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾರೈಸಿದ್ದಾರೆ.