ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಕೇಂದ್ರದ ಮಾಜಿ ಸಚಿವ ಜಾಫರ್ ಷರೀಫ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು, ನವೆಂಬರ್ 25, 2018

-ಕೇಂದ್ರದ ಮಾಜಿ ಸಚಿವ ಜಾಫರ್ ಷರೀಫ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ನಮ್ಮ ಕುಟುಂಬದೊಂದಿಗೆ ಜಾಫರ್ ಷರೀಫ್ ಅವರು ಆತ್ಮೀಯ ಸಂಬಂಧ ಹೊಂದಿದ್ದರು. ಕೇಂದ್ರ ಸಚಿವರಾಗಿ ಅವರು ನಾಡಿಗೆ, ದೇಶಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದಾರೆ. ರೈಲ್ವೆ ಸಚಿವರಾಗಿ ಕರ್ನಾಟಕ ರಾಜ್ಯಕ್ಕೆ ಅವರು ನೀಡಿದ ಕೊಡುಗೆ ಅತ್ಯಂತ ಶ್ಲಾಘನೀಯ.

-ರೈಲ್ವೆ ಸಚಿವರಾಗಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚು ಕೊಡುಗೆ ನೀಡಿದವರಲ್ಲಿ ಜಾಫರ್ ಶರೀಫರು ಅಗ್ರಗಣ್ಯರು. ರಾಷ್ಟ್ರಾದ್ಯಂತ ಮೀಟರ್ ಗೇಜ್ ಹಳಿಗಳನ್ನು ಬ್ರಾಡ್ಗೇಜ್ ಗೆ ಪರಿವರ್ತಿಸಿ ಶ್ರೇಯ ಇವರದ್ದು' ಎಂದು ಮುಖ್ಯಮಂತ್ರಿ ಗಳು ಸ್ಮರಿಸಿದ್ದಾರೆ.

-ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

----------------------