ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಅಂಬರೀಷ್ ಅವರದ್ದು ಮೇರು ವ್ಯಕ್ತಿತ್ವ; ಅವರ ಅಗಲಿಕೆ ನೋವು ತಂದಿದೆ: ಮುಖ್ಯಮಂತ್ರಿ ಶೋಕ

ಬೆಂಗಳೂರು, ನವೆಂಬರ್ 25, 2018

-ಕನ್ನಡ ಚಿತ್ರರಂಗ ಕಂಡ ಮಹತ್ವದ ಕಲಾವಿದ ಹಾಗೂ ಅಪರೂಪದ ವ್ಯಕ್ತಿತ್ವದ ರಾಜಕಾರಣಿ ಇನ್ನಿಲ್ಲ ಎನ್ನುವುದು ಅಪಾರ ದುಃಖವನ್ನುಂಟುಮಾಡಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.

-ನನ್ನ ಮತ್ತು ಅವರ ಸ್ನೇಹ ಅನುಗಾಲದ್ದು. ಚಿತ್ರರಂಗ ಹಾಗೂ ರಾಜಕಾರಣವನ್ನು ಮೀರಿದ ಸ್ನೇಹ ನಮ್ಮದಾಗಿತ್ತು.

-ಅಂಬರೀಷ್ ಹೃದಯ ಶ್ರೀಮಂತಿಕೆಯ ವ್ಯಕ್ತಿತ್ವವುಳ್ಳವರಾಗಿದ್ದರು. ಹಾಗಾಗಿಯೇ ಅವರು ಪ್ರತಿಯೊಬ್ಬರ ಗೌರವಕ್ಕೆ ಪಾತ್ರರಾಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

-ಅಂಬರೀಷ್ ಅವರ ಅಕಾಲಿಕ ಮರಣ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೂ ಹಾಗೂ ಅಪಾರ ಅಭಿಮಾನಿಗಳಿಗೂ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

----------------------