ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಮಾಜಿ ಶಾಸಕ ಪ್ರಕಾಶ್ ನಿಧನಕ್ಕೆ ಮುಖ್ಯಮಂತ್ರಿ ಶೋಕ

ಬೆಂಗಳೂರು, ನವೆಂಬರ್ 27, 2018

-ಹಾಸನದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

-ಜನಾನುರಾಗಿ ಹಾಗೂ ಪರೋಪಕಾರಿಯಾಗಿದ್ದ ಪ್ರಕಾಶ್ ಅವರ ನಿಧನದಿಂದ ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿಯೂ ತುಂಬಲಾರದ ನಷ್ಟವೆಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

-ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ.

----------------------