ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಕೆಜಿಎಫ್ ಮಾಜಿ ಶಾಸಕ ಎಂ ಭಕ್ತವತ್ಸಲಂ ನಿಧನಕ್ಕೆ ಮುಖ್ಯಮಂತ್ರಿ ಶೋಕ

ಬೆಂಗಳೂರು, ನವೆಂಬರ್ 28, 2018

-ಕೆಜಿಎಫ್ ಮಾಜಿ ಶಾಸಕ ಎಂ ಭಕ್ತವತ್ಸಲಂ ಅವರು ಹೃದಯಾಘಾತದಿಂದ ನಿಧನರಾದರೆಂಬ ಸುದ್ದಿ ತಿಳಿದು ತುಂಬಾ ದುಖವಾಗಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

-ಕೋಲಾರ ಜಿಲ್ಲೆಯ ಕೆಜಿಎಫ್ ಕ್ಷೇತ್ರದಲ್ಲಿ ಅವರು 5 ಬಾರಿ ನಗರಸಭೆ ಅಧ್ಯಕ್ಷರಾಗಿ, ಒಂದು ಬಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಮೂರು ಭಾರಿ ವಿಧಾನಸಭಾ ಸದಸ್ಯರಾಗಿದ್ದರು. ಜನಾನುರಾಗಿಯಾಗಿ ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಅವರು ನಮ್ಮ ಪಕ್ಷದ ಮುಖಂಡರಾಗಿದ್ದರು. ಅವರ ನಿಧನದಿಂದ ಸಾರ್ವಜನಿಕ ಕ್ಷೇತ್ರ ಮುತ್ಸದ್ದಿಯೊಬ್ಬರನ್ನು ಕಳೆದುಕೊಂಡಂತಾಗಿದೆ.

-ಎಂ ಭಕ್ತವತ್ಸಲಂ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

----------------------