ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಡಿಸೆಂಬರ್ 28, 2018

-ರಾಜ್ಯದ ಐಪಿಎಸ್ ಅಧಿಕಾರಿ ವಿ.ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಹೈದರಾಬಾದ್ ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದು ತಿಳಿದು, ಅಲ್ಲಿನ ವೈದ್ಯರೊಂದಿಗೆ ಮಾತನಾಡಿದ್ದೆ.

-ಅವರ ಪರಿಸ್ಥಿತಿ ಗಂಭೀರವಾಗಿದ್ದರೂ ಸಾವಿನೊಂದಿಗೆ ಹೋರಾಡಿ ಜಯಿಸುವರೆಂದೇ ನಂಬಿದ್ದೆ. ಅತ್ಯುತ್ತಮ ಅಧಿಕಾರಿಯಾಗಿದ್ದ ಅವರು ನೇರ ನಡೆನುಡಿಗಳಿಂದ ಜನಪ್ರಿಯರಾಗಿದ್ದರು. ಅವರ ಅಕಾಲಿಕ ನಿಧನ ತೀವ್ರ ಆಘಾತ ಉಂಟು ಮಾಡಿದೆ.

-ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬದವರಿಗೆ ಈ ಆಘಾತ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

----------------------