ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಭಾರತ ರತ್ನ , ಪದ್ಮ ಪ್ರಶಸ್ತಿ: ಮುಖ್ಯಮಂತ್ರಿ ಅಭಿನಂದನೆ

ಜನವರಿ 26, 2019

-ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಹಾಗೂ ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಗಣ್ಯರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದ್ದಾರೆ.

-ಕೆಲವು ಸಾಧಕರಿಗೆ ಮರಣೋತ್ತರವಾಗಿಯದರೂ ಈ ಪ್ರಶಸ್ತಿಗಳು ಘೋಷಣೆಯಾಗಿರುವ ಕುರಿತು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

-ರಾಜ್ಯದ ವಿಜ್ಞಾನಿ ರೋಹಿಣಿ ಗೋಡ್ಬೋಲೆ, ಸಂಗೀತ ವಿದ್ವಾಂಸ ಪಂ. ರಾಜೀವ್ ತಾರಾನಾಥ, ಸಾಲುಮರದ ತಿಮ್ಮಕ್ಕನವರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದಿರುವುದು ಸಂತಸ ತಂದಿದೆ.

-ಆದರೆ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಹಾಗೂ ಇನ್ನೂ ಹಲವು ಅರ್ಹ ಸಾಧಕರಿಗೆ ಪದ್ಮ ಪ್ರಶಸ್ತಿ ನಿರೀಕ್ಷಿಸಿದ್ದೆವು. ಇದು ಕೈಗೂಡದಿರುವುದು ನಿರಾಸೆ ತಂದಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

----------------------