ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ನಿಧನಕ್ಕೆ ಮುಖ್ಯಮಂತ್ರಿಗಳ ಶೋಕ

ಜನವರಿ 29, 2019

-ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

-ಜಾರ್ಜ್ ಫರ್ನಾಂಡಿಸ್ ಅವರು ಮಹತ್ವದ ಸಮಾಜವಾದಿಯಾಗಿದ್ದರಲ್ಲದೆ ರಾಜಕೀಯ ಕ್ಷೇತ್ರದ ಪ್ರಮುಖರಾಗಿದ್ದರು. ಕೊಂಕಣ ರೈಲ್ವೆ ಯೋಜನೆಯ ಹಿಂದಿನ ಮಹತ್ವದ ಶಕ್ತಿಯಾಗಿದ್ದರು. ಈ ಯೋಜನೆಗೆ ಅವರು ನೀಡಿದ ಕೊಡುಗೆಗಾಗಿ ರಾಜ್ಯದ ಜನತೆ ಅವರನ್ನು ಎಂದಿಗೂ ನೆನಪಿನಲ್ಲಿಟ್ಟುಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

-ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

----------------------