ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಕೋ. ಚನ್ನಬಸಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಫೆಬ್ರವರಿ 23, 2019

-ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸಾಹಿತಿ ಕೋ.ಚನ್ನಬಸಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಕೋ. ಚನ್ನಬಸಪ್ಪ ಅವರು ವೃತ್ತಿಯಿಂದ ವಕೀಲ, ನ್ಯಾಯಾಧೀಶರಾದರೂ ಪ್ರವೃತ್ತಿಯಿಂದ ಸಾಹಿತಿಯಾಗಿ ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ.

-ಇವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

----------------------