ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಮಾತೆ ಮಹಾದೇವಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಮಾರ್ಚ್ 14, 2019

-ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಲಿಂಗಾಯತ ಧರ್ಮ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಮಾತೆ ಮಹಾದೇವಿ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

-ಲಿಂಗಾಯತ ತತ್ವ ಪ್ರಚಾರದ ನಿಟ್ಟಿನಲ್ಲಿ ಅಸಂಖ್ಯಾತ ಕೃತಿಗಳನ್ನು ರಚಿಸಿದ ಮಾತೆ ಮಹಾದೇವಿ ಅವರು ಸಮಾಜವನ್ನು ಒಂದುಗೂಡಿಸುವುದರಲ್ಲಿ ನಿರತರಾಗಿದ್ದರು ಎಂದು ಅವರು ಸ್ಮರಿಸಿದ್ದಾರೆ.

-ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಭಕ್ತವರ್ಗಕ್ಕೆ ಆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಸ್ಮರಿಸಿದ್ದಾರೆ.

----------------------