ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಆದಿಚುಂಚನಗಿರಿ ಶ್ರೀಗಳಿಗೆ ಪಿ ಎಚ್ ಡಿ- ಮುಖ್ಯಮಂತ್ರಿಗಳ ಅಭಿನಂದನೆ

ಮಾರ್ಚ್ 14, 2019

-ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪಿ ಎಚ್ ಡಿ ಪದವಿ ಪಡೆದಿರುವ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗೌರವಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

-'ನಾಥ ಸಂಪ್ರದಾಯ: ಒಂದು ಸಾಂಸ್ಕೃತಿಕ ಅಧ್ಯಯನ' ಎಂಬ ವಿಷಯದ ಕುರಿತ ಮಹಾಪ್ರಬಂಧಕ್ಕೆ ಪಿಎಚ್ ಡಿ ದೊರೆತಿರುವುದು ಅತೀವ ಹರ್ಷವಾಗಿದೆ. ಇಂತಹ ಜವಾಬ್ದಾರಿಯುತ ಸ್ಥಾನದಲ್ಲಿದ್ದೂ ಶ್ರೀಗಳು ಅಧ್ಯಯನ ಪ್ರವೃತ್ತಿಯನ್ನು ಮುಂದುವರಿಸಿರುವುದು ಅನುಕರಣೀಯ ಎಂದು ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

----------------------