ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಮನೋಹರ್ ಪರಿಕ್ಕರ್ ನಿಧನಕ್ಕೆ ಮುಖ್ಯಮಂತ್ರಿಗಳ ಶೋಕ

ಮಾರ್ಚ್ 17, 2019

-ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

-ತಮ್ಮ ಸರಳತೆ, ಸಜ್ಜನಿಕೆಯಿಂದ ಜನಪ್ರಿಯರಾಗಿದ್ದ ಅವರು ಅಪರೂಪದ ರಾಜಕಾರಣಿಯಾಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

-ಪರಿಕ್ಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

----------------------