ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಧಾರವಾಡ ಕಟ್ಟಡ ಕುಸಿತ: ಮುಖ್ಯಮಂತ್ರಿ ದಿಗ್ಭ್ರಮೆ

ಮಾರ್ಚ್ 19, 2019

-ಧಾರವಾಡದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿದು ಕಾರ್ಮಿಕರು ಸಾವನ್ನಪ್ಪಿದ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

-ಅವರು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿ ರಕ್ಷಣಾ ಕಾರ್ಯಾಚರಣೆ ಕುರಿತು ಚರ್ಚಿಸಿದರು. ಬೆಂಗಳೂರಿನಿಂದ ವಿಶೇಷ ರಕ್ಷಣಾ ತಂಡವೊಂದನ್ನು ಇಂದು ಸಂಜೆ ವಿಶೇಷ ವಿಮಾನದಲ್ಲಿ ಕಳುಹಿಸುವಂತೆ ಸೂಚನೆ ನೀಡಿದರು.

-ಅಲ್ಲದೆ ಸುತ್ತಮುತ್ತಲಿನ ಆರೋಗ್ಯ ಕೇಂದ್ರ ಆಸ್ಪತ್ರೆಗಳ ವೈದ್ಯಕೀಯ ತಂಡಗಳನ್ನು ನಿಯೋಜಿಸಿ, ಗಾಯಾಳುಗಳಿಗೆ ಕೂಡಲೇ ಚಿಕಿತ್ಸೆ ಒದಗಿಸಲು ಕ್ರಮವಹಿಸುವಂತೆ ಸೂಚನೆ ನೀಡಿದರು.

----------------------