ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಸಚಿವ ಸಿ.ಎಸ್. ಶಿವಳ್ಳಿ ನಿಧನ: ಮುಖ್ಯಮಂತ್ರಿ ದಿಗ್ಭ್ರಮೆ

ಮಾರ್ಚ್ 22, 2019

-ಪೌರಾಡಳಿತ ಸಚಿವ ಸಿ ಎಸ್ ಶಿವಳ್ಳಿ ಅವರ ನಿಧನ ತೀವ್ರ ಆಘಾತವನ್ನು ತಂದಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

-ಧಾರವಾಡದ ಕಟ್ಟಡ ದುರಂತ ಸ್ಥಳದಲ್ಲಿ ಕಳೆದ ಮೂರು ದಿನಗಳಿಂದ ಉಪಸ್ಥಿತರಿದ್ದು ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದ ಶಿವಳ್ಳಿ ಅವರು ಇನ್ನಿಲ್ಲ ಎನ್ನುವುದನ್ನು ನಂಬಲಾಗುತ್ತಿಲ್ಲ. ನಿನ್ನೆಯಷ್ಟೇ ನಾನು ಅವರನ್ನು ಭೇಟಿಯಾಗಿ ರಕ್ಷಣಾ ಕಾರ್ಯಾಚರಣೆ ಕುರಿತು ಚರ್ಚಿಸಿದ್ದೆ ಎಂದು ಮುಖ್ಯಮಂತ್ರಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

-ಕುಂದಗೋಳ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದ ಶಿವಳ್ಳಿ ಅವರು ಜನಾನುರಾಗಿಗಳಾಗಿದ್ದರು. ಅವರ ಸಮಾಜಮುಖಿ ಕೆಲಸ ಅವರಿಗೆ ಹೆಸರು ತಂದಿತ್ತು.

-ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

----------------------