ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಭಾಲ್ಕಿ ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ನಿಧನ: ಮುಖ್ಯಮಂತ್ರಿ ದಿಗ್ಭ್ರಮೆ

ಏಪ್ರಿಲ್ 29, 2019

-ಭಾಲ್ಕಿ ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಜನಾನುರಾಗಿ ಶಾಸಕರೆಂದೇ ಜನಪ್ರಿಯರಾಗಿದ್ದ ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

-ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

----------------------