ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಗಿರೀಶ್ ಕಾರ್ನಾಡ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಜೂನ್ 10, 2019

-ಹಿರಿಯ ಸಾಹಿತಿ, ರಂಗಕರ್ಮಿ, ನಟ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

-ಅವರು ಇತಿಹಾಸ, ಪುರಾಣ ಕಥೆಗಳನ್ನು ಆಧರಿಸಿ ಬರೆದ ನಾಟಕಗಳು ಇಂದಿನ ವಸ್ತುಸ್ಥತಿಯನ್ನು ವಿಶ್ಲೇಷಿಸುವ ರೀತಿ ಅಪೂರ್ವವಾದುದು. ಅವರ ನಾಟಕಗಳು ದೇಶ- ವಿದೇಶದ ಹಲವು ಭಾಷೆಗಳಿಗೆ ಅನುವಾದಗೊಂಡು ಪ್ರದರ್ಶನಗೊಂಡವು. ಆ ಮೂಲಕ ಕನ್ನಡ ಸಂಸ್ಕೃತಿಯ ಕಂಪನ್ನು ಜಗತ್ತಿನ ಉದ್ದಗಲಕ್ಕೂ ಪಸರಿಸಿದ ಕೀರ್ತಿ ಅವರದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

-ಚಲನಚಿತ್ರರಂಗದಲ್ಲಿ ನಟನೆ ಹಾಗೂ ನಿರ್ದೇಶನದಲ್ಲಿ ತಮ್ಮದೇ ಛಾಪು ಮೂಡಿಸಿದರು.ನಾಡಿನ ಸಾಂಸ್ಕೃತಿಕ ವಲಯಕ್ಕೆ ಹೊಸ ಹೊಳಪು ನೀಡಿದ ಅಗಾಧ ಪ್ರತಿಭೆಯನ್ನು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ ಎಂದು ಮುಖ್ಯಮಂತ್ರಿಗಳು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

----------------------