ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಹಿರಿಯ ರಾಜಕಾರಣಿ ಎ.ಕೆ.ಸುಬ್ಬಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

know_the_cm

ಬೆಂಗಳೂರು, ಆಗಸ್ಟ್ 27, 2019

-ಹಿರಿಯ ಮುತ್ಸದ್ದಿ, ರಾಜಕಾರಣಿ, ಹೋರಾಟಗಾರ ಎ.ಕೆ.ಸುಬ್ಬಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

-ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ ಅತ್ಯಂತ ನಿಷ್ಠುರ ನಾಯಕ ಎ.ಕೆ.ಸುಬ್ಬಯ್ಯ ಅವರು ಅನ್ಯಾಯದ ವಿರುದ್ಧ ಸದಾ ಹೋರಾಡಿದವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

-ಅವರ ನಿಧನದಿಂದ ರಾಜ್ಯ ಒಬ್ಬ ನೇರ, ನಿಷ್ಠುರ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಭಗವಂತ ಅವರ ಕುಟುಂಬದವರಿಗೆ ದು:ಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

******************