ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಬೆಂಗಳೂರಿನಲ್ಲಿ ಸೌದಿ ಅರೇಬಿಯಾ ಕಾನ್ಸುಲೇಟ್ ಕಚೇರಿ ಆರಂಭ

ಮಾನ್ಯ ಮುಖ್ಯಮಂತ್ರಿ

ವಿಧಾನಸೌಧ (ಬೆಂಗಳೂರು), ಡಿಸೆಂಬರ್ 04, 2018

-ಬೆಂಗಳೂರಿನಲ್ಲಿ ಸದ್ಯದಲ್ಲಿಯೇ ಸೌದಿ ಅರೇಬಿಯಾ ಕಾನ್ಸುಲೇಟ್ ಕಚೇರಿ ಪ್ರಾರಂಭವಾಗುತ್ತಿರುವುದನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸ್ವಾಗತಿಸಿದ್ದಾರೆ.

-ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ ಭಾರತದಲ್ಲಿನ ಸೌದಿ ಅರೇಬಿಯಾ ರಾಯಭಾರಿ ಡಾ ಸೌದಿ ಮಹಮ್ಮದ್ ಎ. ಅಲ್-ಸತಿ ಈ ವಿಷಯವನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದರು.

-ಪ್ರವಾಸೋದ್ಯಮ ಹಾಗೂ ಮೂಲ ಸೌಲಭ್ಯ ಕ್ಷೇತ್ರಕ್ಕೆ ರಾಜ್ಯದಲ್ಲಿ ವಿಪುಲ ಅವಕಾಶಗಳಿದ್ದು ಈ ನಿಟ್ಟಿನಲ್ಲಿ ಸೌದಿ ಅರೇಬಿಯಾ ಉದ್ಯಮಿಗಳು ಆಸಕ್ತಿ ತೋರಿದರೆ ಎಲ್ಲ ಸಹಕಾರವನ್ನು ನೀಡುತ್ತೇವೆ ಎಂದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ ಉದ್ಯಮ ಸ್ಥಾಪನೆಗೂ ಮುಂದಾಗುವಂತೆ ಸಲಹೆ ನೀಡಿದರು.

-ಬೆಂಗಳೂರು ಮತ್ತು ಸೌದಿ ಅರೇಬಿಯಾ ನಡುವೆ ಪ್ರಯಾಣ ಮಾಡುವ ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಸೌದಿ ಅರೇಬಿಯಾಗೆ ವೀಸಾ ಕೋರುವವರ ಸಂಖ್ಯೆಯೂ ದುಪ್ಪಟ್ಟು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಕಾನ್ಸುಲೇಟ್ ನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಸೌದಿ ಅರೇಬಿಯಾದ ರಾಯಭಾರಿಗಳು ಮುಖ್ಯಮಂತ್ರಿಗಳಿಗೆ ತಿಳಿಸಿದರು.

-ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್.ರೋಷನ್ ಬೇಗ್ ಉಪಸ್ಥಿತರಿದ್ದರು.

ಮಾನ್ಯ ಮುಖ್ಯಮಂತ್ರಿ

***********************************************