ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಪಂಚರಾಜ್ಯ ಚುನಾವಣಾ ಫಲಿತಾಂಶ: ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ - ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಸುವರ್ಣ ವಿಧಾನಸೌಧ (ಬೆಳಗಾವಿ), ಡಿಸೆಂಬರ್ 11, 2018

-ಐದು ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿಪ್ರಾಯ ಪಟ್ಟಿದ್ದಾರೆ.

-ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾರ ನೀಡಿರುವ ತೀರ್ಪು ಜಾತ್ಯತೀತ ಪಕ್ಷಗಳತ್ತ ರಾಷ್ಟ್ರ ಸಾಗುತ್ತಿರುವುದರ ದ್ಯೋತಕವಾಗಿದೆ. ದೇಶದಾದ್ಯಂತ ಏಕಪಕ್ಷೀಯ ಆಡಳಿತದ ನಿರೀಕ್ಷೆ ಇಟ್ಟುಕೊಂಡು ವಿರೋಧ ಪಕ್ಷಗಳನ್ನು ದಮನ ಮಾಡಲು ಮುಂದಾಗಿದ್ದವರಿಗೆ ಮುಖಭಂಗವಾಗಿದೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

-ಈ ಐದೂ ರಾಜ್ಯಗಳ ಫಲಿತಾಂಶ ಜಾತ್ಯತೀತ ಪಕ್ಷಗಳೆಲ್ಲವೂ ಜೊತೆಯಾಗಿ ಚುನಾವಣೆ ಎದುರಿಸುವ ವೇದಿಕೆಯನ್ನು ದೊರಕಿಸಿಕೊಟ್ಟಿದೆ. ಕಾಂಗ್ರೆಸ್ ಪಕ್ಷದ ನಾಯಕಿ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಅಧ್ಯಕ್ಷ ಶ್ರೀ ರಾಹುಲ್ ಗಾಂಧಿ ಅವರ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸಿರುವ ಮುಖ್ಯಮಂತ್ರಿಗಳು ಸಮಾನ ಮನಸ್ಕ ರಾಜಕೀಯ ನಾಯಕರನ್ನು ಒಂದೆಡೆಗೆ ತರಲು ರಾಹುಲ್ ಗಾಂಧಿ ಹಾಗೂ ಜಾತ್ಯತೀತ ಪಕ್ಷಗಳ ನಾಯಕರು ಮುಂದಾಗಬೇಕು ಎಂದು ಆಶಿಸಿದ್ದಾರೆ.

***********************************************