ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಾಳೆ ಬೆಳಿಗ್ಗೆ ಅಧಿಕಾರಿಗಳ ಸಭೆ

ಮಾನ್ಯ ಮುಖ್ಯಮಂತ್ರಿ

ಸುವರ್ಣ ವಿಧಾನಸೌಧ (ಬೆಳಗಾವಿ), ಡಿಸೆಂಬರ್ 13, 2018

-ಕಬ್ಬು ಬೆಳೆಗಾರರಿಗೆ ಒಪ್ಪಂದದಂತೆ ನೀಡಬೇಕಾಗಿದ್ದ ಬಾಕಿ ಪಾವತಿಸದ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿ, ಬಾಕಿ ಪಾವತಿಗೆ ಸೂಚನೆ ನೀಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

-ಪ್ರತಿಭಟನಾ ನಿರತ ಕಬ್ಬು ಬೆಳೆಗಾರರನ್ನು ತಮ್ಮ ಕಛೇರಿಯಲ್ಲಿ ಭೇಟಿಯಾದ ಮುಖ್ಯಮಂತ್ರಿಗಳು ಸಕ್ಕರೆ ಇಲಾಖೆ ಕಾರ್ಯದರ್ಶಿ, ಆಯುಕ್ತರು ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳು ಈ ಕುರಿತು ಕ್ರಮ ಕೈಗೊಂಡು, ಕಬ್ಬು ಬೆಳೆಗಾರರ ಹಿತ ರಕ್ಷಿಸುವಂತೆ ನಿರ್ದೇಶನ ನೀಡಿದರು.

-ಅದರಂತೆ ನಾಳೆ ಬೆಳಿಗ್ಗೆ 10.30 ಗಂಟೆಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಹಿರಿಯ ಅಧಿಕಾರಿಗಳು ಸಭೆ ನಡೆಸಲಿದ್ದಾರೆ.

-ಸಕ್ಕರೆ ಇಲಾಖೇ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಸಕ್ಕರೆ ಆಯುಕ್ತ ಅಜಯ್ ನಾಗಭೂಷಣ್ ಮೊದಲಾದವರು ಉಪಸ್ಥಿತರಿದ್ದರು.

***********************************************