ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ರಸ್ತೆ ಸುರಕ್ಷತೆ ಜಾಗೃತಿ ಪ್ರಚಾರೋಂದಲನಕ್ಕೆ ಚಾಲನೆ, ಪೈಲಟ್ ಯೋಜನೆ ವಿಸ್ತರಣೆಗೆ ಕ್ರಮ: ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

(ಬೆಳಗಾವಿ), ಡಿಸೆಂಬರ್ 14, 2018

-ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ದೃಷ್ಟಿಯಿಂದ ಯರಗಟ್ಟಿ-ಬೆಳಗಾವಿ ರಾಜ್ಯ ಹೆದ್ದಾರಿ-20 ರಲ್ಲಿ ವಿಶ್ವಬ್ಯಾಂಕ್ ನೆರವಿನಿಂದ ಅನುಷ್ಠಾನಗೊಳಿಸಿರುವ ಪೈಲಟ್ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸುವ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

-ವಿಶ್ವಬ್ಯಾಂಕ್ ನೆರವಿನಿಂದ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆಶಿಪ್) ಅಡಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಶುಕ್ರವಾರ (ಡಿ. 14) ಆಯೋಜಿಸಿದ್ದ ಸುರಕ್ಷಿತ ಮಾರ್ಗ ಪ್ರಾತ್ಯಕ್ಷಿಕೆ ಕಾರ್ಯಕ್ರಮದ ರಸ್ತೆ ಸುರಕ್ಷತಾ ಜಾಗೃತಿ ಪ್ರಚಾರೋಂದಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

-ಅಪಘಾತ ಪ್ರಮಾಣ ತಗ್ಗಿಸುವ ಮೂಲಕ ಜನರ ಪ್ರಾಣರಕ್ಷಣೆಗೆ ಅಗತ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ.

-ಯರಗಟ್ಟಿ-ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಸುರಕ್ಷತೆಗಾಗಿ ಅಂತರ್ ರಾಷ್ಟ್ರೀಯ ದರ್ಜೆಯ ವಿನೂತನ ಪ್ರಯೋಗವನ್ನು ರಾಜ್ಯದಲ್ಲಿಯೇ ಮೊದಲ ಬಾರಿ ಅನುಷ್ಠಾನಗೊಳಿಸಲಾಗಿದೆ.

-ಮುಂಬರುವ ದಿನಗಳಲ್ಲಿ ರಾಜ್ಯದ ಇತರೆ ಹೆದ್ದಾರಿಗಳಲ್ಲೂ ದಿನಗಳಲ್ಲಿ ಇದೇ ಮಾದರಿಯ ಸುರಕ್ಷತಾ ಕ್ರಮ ಅಳವಡಿಸಲಾಗುವುದು ಎಂದರು.

-ರಸ್ತೆ ಅಪಘಾತ ಸಂದರ್ಭದಲ್ಲಿ ತಕ್ಷಣವೇ 108 ಆಂಬ್ಯುಲೆನ್ಸ್ ಗೆ ಕರೆ ಮಾಡಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸುವ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಿರುಚಿತ್ರವನ್ನು ಮುಖ್ಯಮಂತ್ರಿಗಳು ವೀಕ್ಷಿಸಿದರು.

ಮಾನ್ಯ ಮುಖ್ಯಮಂತ್ರಿ

-ಮದ್ಯಪಾನದ ಮಾಡಿ ವಾಹನ ಚಾಲನೆ ಮಾಡುವುದರಿಂದ ಆಗುವ ಅನಾಹುತಗಳ ಕುರಿತು ಜಾಗೃತಿ ಮೂಡಿಸುವ ಜನಪದ ಗೀತೆ ಆಲಿಸಿದರು.

-ನಂತರ ರಸ್ತೆ ಸುರಕ್ಷತೆ ಕುರಿತ ಕ್ಯಾಲೆಂಡರ್, ರೇಡಿಯೋ ಜಿಂಗಲ್, ಮಡಿಕೆಪತ್ರ ಮತ್ತಿತರ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿದರು.

ಮಾನ್ಯ ಮುಖ್ಯಮಂತ್ರಿ

-ಮಾಜಿ ಸಚಿವರು ಮತ್ತು ಯಮಕನಮರಡಿ ಮತಕ್ಷೇತ್ರದ ಶಾಸಕರಾದ ಸತೀಶ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

-ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಕೆಶಿಪ್ ಮುಖ್ಯ ಯೋಜನಾಧಿಕಾರಿ ನವೀನರಾಜ್ ಸಿಂಗ್, ಯೋಜನಾ ನಿರ್ದೇಶಕ ಬಿ.ಶಿವಶಂಕರ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

***********************************************