ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

(ಚೆನ್ನೈ), ಡಿಸೆಂಬರ್ 14, 2018

-ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಚೆನ್ನೈನ ರೇಲಾ ಇನ್ಸ್ಟಿಟ್ಯೂಟ್ ಆಂಡ್ ಮೆಡಿಕಲ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಆರೋಗ್ಯ ವಿಚಾರಿಸಿದರು.

-ಶ್ರೀಗಳು ಶೀಘ್ರವೇ ಗುಣಮುಖರಾಗಿ ಜನತಾ ಜನಾರ್ದನನ ಸೇವೆಯಲ್ಲಿ ತೊಡಗಲಿ. ಶ್ರೀಗಳು ಮಾಡುತ್ತಿರುವ ತ್ರಿವಿಧ ದಾಸೋಹ ಕೈಂಕರ್ಯ ಇಡೀ ದೇಶಕ್ಕೆ ಮಾದರಿಯಾಗಿದ್ದು ಅವರ ಆಶೀರ್ವಾದ ಎಲ್ಲರ ಮೇಲೂ ನಿರಂತರವಾಗಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

***********************************************