ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಸುಲ್ವಾಡಿ ಗ್ರಾಮ ಪ್ರಸಾದ ದುರಂತ......

ಮಾನ್ಯ ಮುಖ್ಯಮಂತ್ರಿ

(ಬೆಂಗಳೂರು), ಡಿಸೆಂಬರ್ 15, 2018

ಸುಳವಾದಿ ಘಟನೆ: ಅಗತ್ಯವಿದ್ದರೆ ಖಾಸಗಿ ವೈದ್ಯರ ಸೇವೆ ಪಡೆಯಲು ಮುಖ್ಯಮಂತ್ರಿ ಸೂಚನೆ

-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಳಿಗ್ಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಸುಳವಾಡಿ ಘಟನೆಯ ಮಾಹಿತಿ ಪಡೆಯುತ್ತಿದ್ದಾರೆ ಅಲ್ಲದೆ, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಚಾಮರಾಜನಗರ ಪೋಲಿಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿ ಈ ಘಟನೆಯಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥಗೊಂಡವರು ಅಕ್ಕಪಕ್ಕದ ಗ್ರಾಮಗಳಲ್ಲಿ ಇದ್ದಾರೆಯೇ ಎಂದು ಪತ್ತೆ ಹಚ್ಚಿ ಅವರ ಚಿಕಿತ್ಸೆಗೆ ಕ್ರಮ ಕೈಗೊಳ್ಳಲು ಸೂಚಿಸಿದರು.

-ಇದಲ್ಲದೆ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಇದ್ದಲ್ಲಿ ಖಾಸಗಿ ವೈದ್ಯರ ಸೇವೆ ಪಡೆಯುವಂತೆ ಸೂಚಿಸಿದರು. ಪ್ರಕರಣದ ತನಿಖೆಯನ್ನು ಶೀಘ್ರವೇ ಪೂರ್ಣಗೊಳಿಸಿ ಘಟನೆಗೆ ಕಾರಣ ಪತ್ತೆ ಮಾಡುವಂತೆ ತಿಳಿಸಿದರು.

(ಮೈಸೂರು), ಡಿಸೆಂಬರ್ 14, 2018

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಅಸ್ವಸ್ಥರಾದವರು ಹಾಗೂ ಅವರ ಕುಟುಂಬದವರಿಗೆ ಧೈರ್ಯ ತುಂಬಿದರು. ಅವರಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಗಳೊಂದಿಗೆ ಚರ್ಚಿಸಿದರು.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

(ಬೆಂಗಳೂರು), ಡಿಸೆಂಬರ್ 14, 2018

ಸುಲ್ವಾಡಿ ಘಟನೆ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಸಂಜೆ ಚೆನ್ನೈನಿಂದ ವಾಪಸಾದ ತಕ್ಷಣ ವಿಮಾನ ನಿಲ್ದಾಣದಲ್ಲಿಯೇ ಚಾಮರಾಜನಗರ ಜಿಲ್ಲೆಯ ಸುಲ್ವಾಡಿ ಗ್ರಾಮದ ಘಟನೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

-ಮೃತ ಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು.

-ಮುಖ್ಯಮಂತ್ರಿಗಳು ಕೂಡಲೇ ವಿಶೇಷ ವಿಮಾನದಲ್ಲಿ ಮೈಸೂರಿಗೆ ತೆರಳಿ ಕೆ.ಆರ್. ಆಸ್ಪತ್ರೆ ಹಾಗೂ ಜೆ ಎಸ್ ಎಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಅಸ್ವಸ್ಥರನ್ನು ಭೇಟಿ ಮಾಡಲಿದ್ದಾರೆ.

-ಮೈಸೂರಿನಿಂದ 15 ಅಂಬ್ಯುಲೆನ್ಸ್ ಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ.

-ಈ ಘಟನೆಯಲ್ಲಿ ಅಸ್ವಸ್ಥಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿ ಗಳಿಗೆ ಸೂಚಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದರು.

(ಚೆನ್ನೈ), ಡಿಸೆಂಬರ್ 14, 2018

ಸುಲ್ವಾಡಿ ಗ್ರಾಮ ಪ್ರಸಾದ ದುರಂತ: ಸಿ ಎಂ ಸಂತಾಪ

-ಚಾಮರಾಜನಗರ ಜಿಲ್ಲೆಯ ಸುಲ್ವಾಡಿ ಗ್ರಾಮದಲ್ಲಿ ಪ್ರಸಾದ ಸ್ವೀಕರಿಸಿ ಐವರು ಮೃತಪಟ್ಟಿರುವುದಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಚೆನ್ನೈಗೆ ತೆರಳಿದ್ದ ಮುಖ್ಯಮಂತ್ರಿಗಳು ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಂಡರು.

-ಘಟನೆಯ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿ ವಿಚಾರಣೆ ನಡೆಸಿ ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿದರು.

-ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

***********************************************