ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮುಧೋಳ ಸ್ಫೋಟ ಪ್ರಕರಣ: ಪರಿಹಾರ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಸೂಚನೆ

ಮಾನ್ಯ ಮುಖ್ಯಮಂತ್ರಿ

(ಬೆಳಗಾವಿ), ಡಿಸೆಂಬರ್ 16, 2018

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದ ಸಕ್ಕರೆ ಕಾರ್ಖಾನೆಯಲ್ಲಿನ ಸಂಸ್ಕರಣಾ ಘಟಕದಲ್ಲಿ ಸಂಭವಿಸಿರುವ ಸ್ಫೋಟದಲ್ಲಿ 4 ಜನ ಮೃತ ಪಟ್ಟಿರುವ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

-ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಅವರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.

-ಬಾಗಲಕೋಟೆ, ವಿಜಾಪುರ, ಹುಬ್ಬಳ್ಳಿ ಜಿಲ್ಲೆಗಳಿಂದ ಆಂಬ್ಯುಲೆನ್ಸ್ ಗಳನ್ನು ಕಳುಹಿಸಿ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗಳಿಗೆ ರವಾನಿಸುವಂತೆ ಹಾಗೂ ಘಟನೆಯ ಪೂರ್ಣ ತನಿಖೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಮುಖ್ಯ ಮಂತ್ರಿಗಳು ಸೂಚಿಸಿದ್ದಾರೆ.

ಮೃತರ ಕುಟುಂಬಗಳಿಗೆ ಅಗತ್ಯ ನೆರವು ಹಾಗೂ ಪರಿಹಾರ ಒದಗಿಸಲು ಸಹ ಅವರು ಸೂಚನೆ ನೀಡಿದ್ದಾರೆ.

***********************************************