ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕಿತ್ತೂರು ಅಭಿವೃದ್ಧಿಗೆ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಸುವರ್ಣ ವಿಧಾನಸೌಧ (ಬೆಳಗಾವಿ), ಡಿಸೆಂಬರ್ 19, 2018

-ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

-ಅವರು ಸುವರ್ಣ ವಿಧಾನಸೌಧದಲ್ಲಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಮಾನ್ಯ ಮುಖ್ಯಮಂತ್ರಿ

-ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಪಾರಂಪರಿಕ ಸ್ಥಳಗಳ ಅಭಿವೃದ್ಧಿಗಾಗಿ 134.55 ಕೋಟಿ ರೂ.ಗಳ ಕ್ರಿಯಾಯೋಜನೆ ಈಗಾಗಲೇ ತಯಾರಿಸಲಾಗಿದ್ದು ಬಿಡುಗಡೆ ಮಾಡಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಿ, ಬಳಿಕ ಅಗತ್ಯ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

-ಕಿತ್ತೂರು ಹಾಗೂ ಸುತ್ತಮುತ್ತಲಿನ ಪಾರಂಪರಿಕ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು 200 ಕೋಟಿ ರೂ. ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

-ಕಿತ್ತೂರು ಚೆನ್ನಮ್ಮ ಉತ್ಸವವನ್ನು ರಾಜ್ಯಮಟ್ಟದ ಉತ್ಸವವೆಂದು ಪರಿಗಣಿಸಲು ಈ ಸಂದರ್ಭದಲ್ಲಿ ಶಾಸಕ ಮಹಾಂತೇಶ ಬ ದೊಡ್ಡಗೌಡರ ವಿನಂತಿಸಿದರು. ಮಡಿವಾಳ ರಾಜಯೋಗೀಂದ್ರ ಸ್ವಾಮಿಗಳು ಪ್ರಾಧಿಕಾರದ ವತಿಯಿಂದ ಆಗಲೇಬೇಕಾದ ಅಭಿವೃದ್ಧಿ ಕಾರ್ಯ ಮತ್ತು ಯೋಜನೆಗಳ ಪಟ್ಟಿಯನ್ನು ನೀಡಿದರು.

***********************************************