ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ಚೆನ್ನಮ್ಮ ಮತ್ತು ರಾಯಣ್ಣ ಹೆಸರಿಡಲು ಮುಖ್ಯಮಂತ್ರಿಗಳ ಶಿಫಾರಸು

ಮಾನ್ಯ ಮುಖ್ಯಮಂತ್ರಿ

(ಬೆಂಗಳೂರು), ಡಿಸೆಂಬರ್ 22, 2018

-ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಕೋರಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರಿಗೆ ಪತ್ರ ಬರೆದಿದ್ದಾರೆ.

-ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟಗಾರರಾಗಿ ಈ ಭಾಗದ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಆದ್ದರಿಂದ ಈ ವಿಮಾನ ನಿಲ್ದಾಣ ಗಳಿಗೆ ಅವರ ಹೆಸರು ಇಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.

***********************************************