ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಹೇಮಾವತಿ, ಎತ್ತಿನಹೊಳೆ ಮತ್ತು ಯಗಚಿ ಯೋಜನೆ: ಪರಿಹಾರ ವಿತರಣೆ ಚುರುಕುಗೊಳಿಸಲು ಮುಖ್ಯಮಂತ್ರಿ ಸೂಚನೆ

ಮಾನ್ಯ ಮುಖ್ಯಮಂತ್ರಿ

ಗೃಹ ಕಚೇರಿ ಕೃಷ್ಣಾ (ಬೆಂಗಳೂರು), ಜನವರಿ 09, 2019

-ಹೇಮಾವತಿ ಯೋಜನೆಗಳು ಹಾಗೂ ಎತ್ತಿನಹೊಳೆ ಯೋಜನೆಯಡಿ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಹಾರ ವಿತರಣೆಯನ್ನು ಚುರುಕುಗೊಳಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

-ಅವರು ಇಂದು ಹೇಮಾವತಿ ಜಲಾಶಯ ಮತ್ತು ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ಹಾಗೂ ಯಗಚಿ ಯೋಜನೆಯ ಭೂಪರಿಹಾರಕ್ಕೆ ಸಂಬಂಧಿಸಿದಂತ ಸಭೆ ನಡೆಸಿದರು.

-ಹಾಸನ ಜಿಲ್ಲೆಯ ಹೇಮಾವತಿ ಯೋಜನಾ ವ್ಯಾಪ್ತಿಯಡಿ ( ಹೇಮಾವತಿ ಮತ್ತು ಯಗಚಿ ಜಲಾಶಯ) ಸುಮಾರು 2228 ಭೂ ಪಾವತಿ ಪ್ರಕರಣಗಳು ಬಾಕಿ ಇವೆ. ಈ ಪ್ರಕರಣಗಳಿಗೆ ಸುಮಾರು 350.00 ಕೋಟಿ ಮೊತ್ತದ ಭೂ ಪರಿಹಾರ ಪಾವತಿ ಬಾಕಿ ಇವೆ. ಈ ಪೈಕಿ 975 ಎಲ್.ಎ.ಸಿ ಪ್ರಕರಣಗಳಿದ್ದು, 94.28 ಕೋಟಿ ಮೊತ್ತವನ್ನು ನ್ಯಾಯಾಲಯಕ್ಕೆ ಠೇವಣಿಗೊಳಿಸುವುದು ಬಾಕಿ ಇರುವುದರಿಂದ ತ್ವರಿತವಾಗಿ ಹಣ ಬಿಡುಗಡೆಗೆ ಕ್ರಮಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿಗಳು ತಿಳಿಸಿದರು.

-ಪರಿಹಾರ ಮೊತ್ತದ ವಿತರಣೆಯಲ್ಲಿ ವ್ಯತ್ಯಯ ಉಂಟಾಗಿರುವುದರಿಂದ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸರ್ವೇಯರ್‍ಗಳ ವಿಶೇಷ ತಂಡವನ್ನು ರಚಿಸಿ ಸಮೀಕ್ಷೆಯನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.

-ಭೂ ಸ್ವಾಧೀನದಲ್ಲಿ ನ್ಯಾಯೋಚಿತ ಪರಿಹಾರ ಮತ್ತು ಪಾರದರ್ಶಕತೆ, ಪುನರ್ವಸತಿ ಕಾಯ್ದೆ 2013 ರಡಿ ಭೂಸ್ವಾಧೀನಕ್ಕೆ ಪ್ರಕ್ರಿಯೆ ಕುರಿತು ಸಾಮಾಜಿಕ ಪರಿಣಾಮ ಮೌಲ್ಯಮಾಪನವನ್ನು ಕೈಗೊಳ್ಳುವ ಅಗತ್ಯವಿದೆ. ಈ ಪ್ರಕ್ರಿಯೆಗೆ ಸುಮಾರು 2 ವರ್ಷಗಳ ಕಾಲ ಹಿಡಿಯುವುದರಿಂದ ನೀರಾವರಿ, ಕುಡಿಯುವ ನೀರು, ವಸತಿ ಮತ್ತಿತರ ಸೌಲಭ್ಯಗಳನ್ನು ಪೂರೈಸುವ ಕೆಲಸವನ್ನು ಚುರುಕುಗೊಳಿಸುವುದು ಕಷ್ಟಸಾಧ್ಯ . ಹಾಗಾಗಿ ಸಾಮಾಜಿಕ ಪರಿಣಾಮ ಮೌಲ್ಯಮಾಪನ ಪ್ರಕ್ರಿಯೆಯನ್ನು ಈ ಯೋಜನೆಗಳಲ್ಲಿ ಕೈಬಿಡಲು ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಪರಿಶೀಲಿಸಲು ಮುಖ್ಯಮಂತ್ರಿಗಳು ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಅವರಿಗೆ ತಿಳಿಸಿದರು.

-ಎತ್ತಿನಹೊಳೆ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ವಿಶೇಷ ಭೂಸ್ವಾಧಿನಾಧಿಕಾರಿಗಳ ಹುದ್ದೆ ಅಧಿಕಾರಿಗಳನ್ನು ನಿಯುಕ್ತಿಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

-ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಕೋಲಾರ ಶಾಸಕ ಶ್ರೀನಿವಾಸಗೌಡ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಸಂಸದೀಯ ಕಾರ್ಯದರ್ಶಿ ವೆಂಕಟರಾಮ್, ಕಾನೂನು ಕಾರ್ಯದರ್ಶಿ ಶ್ರೀನಿವಾಸ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ ಮತ್ತಿತತರರು ಸಭೆಯಲ್ಲಿ ಹಾಜರಿದ್ದರು.

*********************************