ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮುದನೂರು ಗ್ರಾಮದಲ್ಲಿ ನೀರಿಗೆ ವಿಷ ಬೆರೆಸಿದ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

ಮಾನ್ಯ ಮುಖ್ಯಮಂತ್ರಿ

(ಬೆಂಗಳೂರು), ಜನವರಿ 10, 2019

-ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಕೀಟನಾಶಕ ಬೆರೆಸಿದ್ದರಿಂದ ಹಲವರು ಅಸ್ವಸ್ಥರಾಗಿ ಮಹಿಳೆಯೊಬ್ಬರು ಮೃತರಾದ ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಂದ ವಿವರ ಪಡೆದಿದ್ದು ಕೂಡಲೇ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸೂಚಿಸಿದ್ದಾರೆ.

-ಈ ಪ್ರಕರಣದ ಬಗ್ಗೆ ತ್ವರಿತವಾಗಿ ತನಿಖೆ ನಡೆಸಿ ಇಂತಹ ದುಷ್ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ.

*********************************