ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಆದಿವಾಸಿಗಳ ಸಮಸ್ಯೆ ಬಗೆಹರಿಸಲು ಆದಿವಾಸಿ ಪ್ರದೇಶಗಳಿಗೆ ಶೀಘ್ರ ಭೇಟಿ : ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ವಿಧಾನಸೌಧ(ಬೆಂಗಳೂರು), ಜನವರಿ 11, 2019

-ರಾಜ್ಯದಲ್ಲಿ ನೆಲೆಸಿರುವ ಆದಿವಾಸಿಗಳ ಸಮಸ್ಯೆ ಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದ್ದು, ಶೀಘ್ರ ದಲ್ಲಿಯೇ ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಹೆ ಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.

-ತ್ರಿಪುರ ಸಂಸದರು ಹಾಗೂ ಆದಿವಾಸಿ ರಾಷ್ಟ್ರೀಯ ಮಂಚ್ ನ ರಾಷ್ಟ್ರೀಯ ಸಂಚಾಲಕರಾದ ಜಿತೇಂದ್ರ ಚೌಧರಿ ನೇತೃತ್ವದಲ್ಲಿ ಆದಿವಾಸಿ ಸಮನ್ವಯ ಸಮಿತಿಯು ಇಂದು ಆಯೋಜಿಸಿದ್ದ ಆದಿವಾಸಿಗಳ ಸಮಸ್ಯೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

-ಅರಣ್ಯ ಹಕ್ಕುಗಳ ಕಾಯ್ದೆ 2006 ಅಂಗೀಕಾರವಾಗಿ 12 ವರ್ಷಗಳು ಕಳೆದಿದ್ದರೂ, ಬಹುತೇಕ ಆದಿವಾಸಿಗಳಿಗೆ ಭೂಮಿಯ ಹಕ್ಕು ಪಡೆಯುವಲ್ಲಿ ಇರುವ ಗೊಂದಲಗಳ ನಿವಾರಣೆ, ಶಿಕ್ಷಣ, ಉದ್ಯೋಗ ಸೇರಿದಂತೆ ಇತರ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಕಾರಾತ್ಮಕವಾಗಿ ತೀರ್ಮಾನ ಕೈಗೊಳ್ಳಲು ಕಂದಾಯ,ಅರಣ್ಯ,ಶಿಕ್ಷಣ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು ಎಂದರು.

ಮಾನ್ಯ ಮುಖ್ಯಮಂತ್ರಿ

-ಆದಿವಾಸಿ ಸಮನ್ವಯ ಸಮಿತಿಯ ಸಂಚಾಲಕ ವೈ.ಕೆ.ಗಣೇಶ್, ಸಹಸಂಚಾಲಕ ಯೆಸ್. ವೈ.ಗುರುಶಾಂತ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

*********************************