ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಶಾಂತಿಯುತವಾಗಿ ನಡೆದ ಸಿದ್ದಗಂಗಾ ಶ್ರೀಗಳ ಅಂತಿಮ ವಿಧಿ ವಿಧಾನ: ಮುಖ್ಯಮಂತ್ರಿ ಕೃತಜ್ಞತೆ

(ತುಮಕೂರು) ಜನವರಿ 22, 2019

-ಸಿದ್ದಗಂಗಾ ಮಠದಲ್ಲಿ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಅಂತಿಮ ಕ್ರಿಯಾ ವಿಧಿಗಳು ಶ್ರದ್ಧಾಪೂರ್ವಕವಾಗಿ, ಶಾಂತಿಯುತವಾಗಿ ನೆರವೇರಿತು.

-ಲಕ್ಷಾಂತರ ಭಕ್ತರು ಶಾಂತಿಯುತವಾಗಿ ಸರತಿಯಲ್ಲಿ ಕಾದು, ಈ ತ್ರಿವಿಧ ದಾಸೋಹಿಗೆ ಅಂತಿಮ ನಮನಗಳನ್ನು ಅರ್ಪಿಸಿದರು. ಇದಕ್ಕಾಗಿ ಸಹಕರಿಸಿದ ಎಲ್ಲರಿಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

-ಜನಸಾಗರವೇ ಹರಿದು ಬಂದರೂ ಎಲ್ಲ ವಿಧಿವಿಧಾನಗಳು ಅಚ್ಚುಕಟ್ಟಾಗಿ ನೆರವೇರಿದವು. ಈ ಸಂದರ್ಭದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಸಿದ್ಧತೆ ನಡೆಸಲು ಶ್ರಮಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಗೃಹ ಸಚಿವ ಎಂ.ಬಿ. ಪಾಟೀಲ, ಸಚಿವ ಸಂಪುಟದ ಸಹೋದ್ಯೋಗಿಗಳು, ತುಮಕೂರು ಜಿಲ್ಲಾಡಳಿತ, ಸೂಕ್ತ ಭದ್ರತಾ ವ್ಯವಸ್ಥೆ ಒದಗಿಸಿ, ಹಗಲು ರಾತ್ರಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಮಠದ ಭಕ್ತರು, ಅಭಿಮಾನಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಎಲ್ಲರಿಗೂ ಮುಖ್ಯಮಂತ್ರಿಗಳು ಧನ್ಯವಾದ ಅರ್ಪಿಸಿದರು.

*********************************