ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕರ್ನಾಟಕದ ಘನತೆ ಹೆಚ್ಚಿಸುವಂತೆ ಕುಂಭಮೇಳ ಆಯೋಜನೆ: ಮುಖ್ಯಮಂತ್ರಿ

(ಬೆಂಗಳೂರು) ಜನವರಿ 23, 2019

-ಟಿ.ನರಸೀಪುರದ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 17 ರಿಂದ ನಡೆಯುವ ಕುಂಭಮೇಳಕಾರ್ಯಕ್ರಮ ಕರ್ನಾಟಕದ ಘನತೆ ಹೆಚ್ಚಿಸುವಂತೆ ನಡೆಯಬೇಕೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

-ಕುಂಭಮೇಳ ಕುರಿತು ಬುಧವಾರ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಧಾರ್ಮಿಕ ಮುಖಂಡರು, ರಾಜಕೀಯ ಗಣ್ಯರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು.

-ಕಾವೇರಿ, ಕಪಿಲಾ, ಸ್ಫಟಿಕ ಸರೋವರಗಳ ತ್ರಿವೇಣಿ ಸಂಗಮದಲ್ಲಿ ನಡೆಯುವ ಕುಂಭಮೇಳ ಅತ್ಯಂತದೊಡ್ಡ ಮಟ್ಟದಲ್ಲಿ ನಡೆಯಬೇಕು. ನಮ್ಮ ಧಾರ್ಮಿಕ ಸಂಸ್ಕøತಿ ಹಾಗೂ ಸಂಪ್ರದಾಯಗಳ ಪ್ರತೀಕವಾಗಿ ಇಂತಹ ಕಾರ್ಯಕ್ರಮಗಳು ಅಗತ್ಯ ಎಂದರು.

-ಮಳೆಗಾಲಕ್ಕೂ ಮುನ್ನಾ ದೇವರ ಆರ್ಶೀವಾದಬೇಕು. ಈ ವರ್ಷ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬರಗಾಲವಿದೆ. ಮುಂದಿನ ವರ್ಷ ಉತ್ತಮ ಮಳೆಯಾಗಿ ಜನ ನಮ್ಮೆದಿಯಿಂದ ಬದುಕಬೇಕು ಎಂದರು.

-ಕುಂಭಮೇಳ ಆಯೋಜನೆಗೆ ಹಣದ ಕೊರತೆ ಇಲ್ಲ. ಸೋಪಾನಕಟ್ಟಿ, ರಸ್ತೆ ದುರಸ್ತಿ, ಶೌಚಾಲಯ, ಸ್ನಾನದ ವ್ಯವಸ್ಥೆ, ಕುಡಿಯುವ ನೀರು ಮುಂತಾದ ವ್ಯವಸ್ಥಿಗಳು ಅಚ್ಚುಕಟ್ಟಾಗಿ ಆಗಬೇಕು ಎಂದರು.

-ಸುತ್ತೂರಿನ ವೀರಾಸಿಂಹಾಸನ ಮಠದ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ, ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಬೆಂಗಳೂರಿನ ಕೈಲಾಸ ಆಶ್ರಮದ ವಿಜಯೇಂದ್ರಪುರಿ ಸ್ವಾಮೀಜಿ ಯವರ ಆಶಯದಂತೆ ಅವರ ಸಲಹೆ ಪಡೆದು ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

-ಈ ಕುಂಭಮೇಳಕ್ಕೆ ಹಲವಾರು ರಾಜ್ಯಗಳಿಂದ ಯತಿವರ್ಯರು ಆಗಮಿಸಲಿದ್ದಾರೆ. ಅವರಿಗೆ ಎಲ್ಲರೀತಿಯ ಸೌಕರ್ಯ ಮಾಡಿಕೊಡಬೇಕು. ಅವರು ಕರ್ನಾಟಕದ ಬಗ್ಗೆ ಒಳ್ಳೆಯ ಮಾತುಗಳನ್ನು ಆಡುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದರು.

-ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಈ ಕುಂಭಮೇಳಕ್ಕೆ ಶಾಶ್ವತವಾದ ಮೂಲ ಸೌಕರ್ಯಗಳ ಒದಗಿಸಲು ಗಮನಹರಿಸಬೇಕು ಎಂದರು.

-ಪ್ರವಾಸೋದ್ಯಮ ಇಲಾಖೆಯಿಂದ ಈ ಕ್ಷೇತ್ರದಲ್ಲಿ ಶಾಶ್ವತವಾದ ಅಭಿವೃದ್ಧಿ ಕೆಲಸ ಮಾಡಲು ನೀಲಿನಕ್ಷೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

-ಉತ್ತರಭಾರತದಲ್ಲಿ ಇತ್ತೀಚಿಗೆ ನಡೆದ ಕುಂಭಮೇಳಕ್ಕೆ ಸುಮಾರು ಸಾವಿರಾರೂ ಕೋಟಿ ರೂ. ಖರ್ಚಾಗಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ. ಅಲ್ಲಿ ಯಾವ ರೀತಿ ಆಯೋಜನೆ ಆಗಿದೆ ಎಂದು ಇಬ್ಬರು ಅಧಿಕಾರಿಗಳು ಹೋಗಿ ಅಧ್ಯಯನ ಮಾಡುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

-ಈ ಕುಂಭಮೇಳದ ಸಂದರ್ಭದಲ್ಲಿಯೂ ಸಹ ಸಾರ್ವಜನಿಕ ಕೆಲಸಗಳಿಗೆ ಅನಾನುಕೂಲ ಆಗಬಾರದು, ಸರ್ಕಾರದ ಕೆಲಸಗಳು ಸಹ ಆಗಬೇಕು ಎಂದರು. ಭತ್ತ ಖರೀದಿ ಕೇಂದ್ರಗಳು ಸರಿಯಾಗಿ ಕೆಲಸ ನಿರ್ವಹಿಸದೆ ಇರುವ ಬಗ್ಗೆ ದೂರುಗಳು ಬಂದಿದೆ.ಇದರ ಬಗ್ಗೆ ಗಮನಹರಿಸಬೇಕು ಎಂದರು.

-ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡ ಅವರು ಮಾತನಾಡಿ ಮುಖ್ಯಮಂತ್ರಿಗಳ ಸೂಚನೆಯಂತೆ ಎಲ್ಲ ವ್ಯವಸ್ಥೆಗಳು ಅಟ್ಟುಕಟ್ಟಾಗಿ ನಡೆಯಬೇಕು. ಕೇವಲ 23 ದಿನಗಳು ಮಾತ್ರ ಉಳಿದಿದೆ. ಸಮಾರೋಪಾದಿಯಲ್ಲಿ ಕೆಲಸಗಳು ಆಗಬೇಕು ಎಂದು ತಿಳಿಸಿದರು.

-ಸಭೆಯಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ, ಬೆಂಗಳೂರಿನ ಕೈಲಾಸ ಆಶ್ರಮದ ವಿಜಯೇಂದ್ರಪುರಿ ಸ್ವಾಮೀಜಿ, ಓಂಕಾರ ಪೀಠದ ಮಧುಸೂದನಾ ನಂದ ಸ್ವಾಮೀಜಿ, ಆದಿಚುಂಚನಗಿರಿ ಮಠದ ಸೋಮೇಶ್ವರ ನಾಥ ಸ್ವಾಮೀಜಿ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವರಾದ ಸಾ.ರಾ. ಮಹೇಶ್, ಸಣ್ಣ ನೀರಾವರಿ ಸಚಿವರಾದ ಸಿ.ಎಸ್. ಪುಟ್ಟರಾಜು, ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ, ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್, ಶಾಸಕರಾದ ಡಾ| ಯತೀಂದ್ರ ಸಿದ್ದರಾಮಯ್ಯ, ಅಶ್ವಿನ್ ಕುಮಾರ್, ಅಡಗೂರು ಹೆಚ್.ವಿಶ್ವನಾಥ್, ಸುರೇಶ್‍ಗೌಡ, ನಾರಾಯಣಗೌಡ, ಶ್ರೀನಿವಾಸ್, ಅನ್ನದಾನಿ, ರವೀಂದ್ರ ಶ್ರೀಕಂಠೇಗೌಡ, ಲೋಕಸಭಾ ಸದಸ್ಯರಾದ ಎಲ್.ಆರ್.ಶಿವರಾಮೇಗೌಡ, ವಿಧಾನ ಪರಿಷತ್ ಸದಸ್ಯರಾದ ಅಪ್ಪಾಜಿಗೌಡ, ಪೊಲೀಸ್ ಅಧೀಕ್ಷಕರಾದ ಅಮಿತ್ ಸಿಂಗ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

*********************************