ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಬರ ಪರಿಹಾರದಲ್ಲಿ ತಾರತಮ್ಯ :ಮುಖ್ಯಮಂತ್ರಿ ವಿಷಾದ

(ಬೆಂಗಳೂರು), ಜನವರಿ 30, 2019

-ಬರ ಸಮಸ್ಯೆ ನಿವಾರಣೆಗೆ 2.5 ಸಾವಿರ ಕೋಟಿ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ನಾವು ಈ ಹಿಂದೆಯೇ ಮನವಿ ಸಲ್ಲಿಸಿದ್ದೆವು. ಈ ಹಿನ್ನೆಲೆಯಲ್ಲಿ ಕೇಂದ್ರ ಅಧಿಕಾರಿಗಳ ತಂಡ ರಾಜ್ಯಕ್ಕೆ ಆಗಮಿಸಿ, ಬರ ಪರಿಸ್ಥಿತಿಯ ಬಗ್ಗೆ ವರದಿಯನ್ನು ನೀಡಿತ್ತು.

-ನಿನ್ನೆ ದಿನ ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಬರ ನಿವಾರಣೆಯ ಸಲುವಾಗಿ 7 ಸಾವಿರ ಕೋಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ ನೀಡಲಾಗಿರುವ ಮೊತ್ತ 900 ಕೋಟಿ ರೂ. ನೆರೆರಾಜ್ಯ ಮಹಾರಾಷ್ಟ್ರಕ್ಕೆ 4000 ಕೋಟಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಬಿಜೆಪಿ ಸರ್ಕಾರ ತೋರಿರುವ ತಾರತಮ್ಯ ನಿಜಕ್ಕೂ ನೋವಿನ ಸಂಗತಿ.

-ಹೆಚ್ಚಿನ ಪರಿಹಾರ ಪಡೆಯುವ ನಿಟ್ಟಿನಲ್ಲಿ ಮತ್ತೆ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಲು ಇವತ್ತಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಕೇಂದ್ರ ಸರ್ಕಾರದ ಈ ತಾರತಮ್ಯ ನಮ್ಮೆಲ್ಲರಿಗೆ ನಿರಾಸೆಯನ್ನು ತಂದಿದೆ.

*********************************