ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಎಸ್.ಎಸ್.ಎಲ್.ಸಿ. , ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಬರೆಯುವ ವಾತಾವರಣ ಕಲ್ಪಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

ಗೃಹ ಕಚೇರಿ ಕೃಷ್ಣಾ (ಬೆಂಗಳೂರು), ಫೆಬ್ರವರಿ 16, 2019

-ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಬರೆಯಲು ಸೂಕ್ತ ವಾತಾವರಣ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

-ಈ ಹಿಂದಿನಂತೆ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸಲು ಗೃಹ ಇಲಾಖೆಗೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.

-ಈ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾದವರು ಹಾಗೂ ಇಡೀ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ತಿಳಿಸಿದರು.

-ಅಂತೆಯೇ ವಿದ್ಯಾರ್ಥಿಗಳು ಹಾಗೂ ಪೋಷಕರು ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಿ. ಸಾಮಾಜಿಕ ಜಾಲತಾಣಗಳಿಂದ ದೂರ ಇರುವುದು ಒಳಿತು ಎಂದು ಸಲಹೆ ಮಾಡಿದರು.

-ಸರ್ಕಾರ ರೂಪಿಸಿದ ಹೊಸ ನಿಯಮಗಳನ್ವಯ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಪೋಷಕರು ಎಚ್ಚರ ವಹಿಸುವಂತೆ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

-ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಗಳ ಆಯುಕ್ತ ಡಾ.ಪಿ.ಸಿ. ಜಾಫರ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

*********************************