ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಯೋಧನ ಸಾವಿಗೆ ಕಂಬನಿ ಮಿಡಿದ ಮುಖ್ಯಮಂತ್ರಿ

ಗುಡಿಗೆರೆ (ಮಂಡ್ಯ), ಫೆಬ್ರವರಿ 16, 2019

-ಪುಲ್ವಾಮಾ ಘಟನೆಯಲ್ಲಿ ಹುತಾತ್ಮರಾದ ಸಿ ಆರ್ ಪಿ ಎಫ್ ಯೋಧ ಹೆಚ್. ಗುರು ಅವರ ಅಂತ್ಯಕ್ರಿಯೆ ಸಂಜೆ ಕೆ.ಎಂ ದೊಡ್ಡಿ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಸಾವಿರಾರು ಜನರು ಯೋಧನ ಸಾವಿಗೆ ಕಂಬನಿ ಮಿಡಿದರು.

-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭಾಗವಹಿಸಿ ಹೆಚ್. ಗುರು ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ನಂತರ ರಾಷ್ಟ್ರಧ್ವಜವನ್ನು ಅವರ ಪತ್ನಿಗೆ ಹಸ್ತಾಂತರಿಸಿದರು.

-ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಅಗಲಿದ ಯೋಧನ ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೆ, ಈ ಸಂದರ್ಭದಲ್ಲಿ ಮಾತನಾಡಿ ನಾವೆಲ್ಲರೂ ದುಃಖತಪ್ತ ಕುಟುಂಬದವರೊಂದಿಗೆ ಬೆಂಬಲಕ್ಕೆ ನಿಲ್ಲಬೇಕಾಗಿದೆ. ಸರ್ಕಾರದಿಂದ ಅವರಿಗೆ ಎಲ್ಲ ಅಗತ್ಯ ನೆರವು ಕಲ್ಪಿಸಲಾಗುವುದು ಎಂದು ತಿಳಿಸಿದರು.

-ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

*********************************