ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಬೆಳಗಾವಿ ವಿಟಿಯು ವಿಭಜನೆ ಸದ್ಯ ಇಲ್ಲ: ಮುಖ್ಯಮಂತ್ರಿ ಸ್ಪಷ್ಟನೆ

(ಮೈಸೂರು), ಫೆಬ್ರವರಿ 19, 2019

-ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ವಿಭಜಿಸಿ ಹಾಸನದಲ್ಲಿ ಪ್ರತ್ಯೇಕ ತಾಂತ್ರಿಕ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಪ್ರಸ್ತಾವನೆ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟ ಪಡಿಸಿದ್ದಾರೆ.

-ನಿನ್ನೆ ಸಮಾರಂಭವೊಂದರಲ್ಲಿ ತಮ್ಮ ಹೇಳಿಕೆ ಕುರಿತು ತಪ್ಪಾಗಿ ಗ್ರಹಿಸಲಾಗಿದೆ.

-ಹಾಸನವನ್ನು ಅತ್ಯುತ್ತಮ ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿ ಪಡಿಸಲಾಗುವುದು. ವಿಟಿಯು ವಿಭಜನೆ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

*********************************