ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಸರ್ಕಾರಿ ಶಾಲಾ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ ಬಿಡುಗಡೆ – ಮುಖ್ಯಮಂತ್ರಿ

know_the_cm

ವಿಧಾನಸೌಧ (ಬೆಂಗಳೂರು) ಸೆಪ್ಟೆಂಬರ್ 05:

ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂಗಳನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ನಗರ ಜಿಲ್ಲಾಡಳಿತ, ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ಏರ್ಪಡಿಸಿದ್ದ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ “ಶಿಕ್ಷಕರ ದಿನಾಚರಣೆ” ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಿನ 6 ತಿಂಗಳಲ್ಲಿ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಪೂರ್ಣ ಪ್ರಮಾಣದ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

ಶಿಕ್ಷಣ ಕ್ಷೇತ್ರದಲ್ಲಿ ಕೆಲವು ಬದಲಾವಣೆ ತರುವ ಮೂಲಕ ಸರ್ಕಾರ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಿದೆ. ಇದಕ್ಕೆ ಸಂಬಂಧಿಸಿದಂತೆ ಶಿಕ್ಷಕರಿಗೆ ವಾರದಲ್ಲಿ 2 ದಿನ ವಿಶೇಷ ತರಬೇತಿಯನ್ನು ನೀಡಲು ಸರ್ಕಾರ ಚಿಂತನೆ ನಡೆಸಿದ್ದು ಶಿಕ್ಷಕರಾದ ತಾವುಗಳು ಇದಕ್ಕೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.