ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಧಾರವಾಡ ಕಟ್ಟಡ ಕುಸಿತ ದುರಂತ ಸ್ಥಳಕ್ಕೆ ಮುಖ್ಯಮಂತ್ರಿಗಳ ಭೇಟಿ

(ಧಾರವಾಡ), ಮಾರ್ಚ್ 21, 2019

-ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಧಾರವಾಡದ ಕುಮಾರೇಶ್ವರ ನಗರದಲ್ಲಿ ಕುಸಿದ ವಾಣಿಜ್ಯ ಕಟ್ಟಡ ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಿದರು.

-ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಹಂತದ ತನಿಖೆ ನಡೆಸಲು ಸೂಚಿಸಲಾಗಿದೆ. ಅಗತ್ಯ ಬಿದ್ದರೆ ಇನ್ನೂ ಉನ್ನತ ತನಿಖೆ ನಡೆಸಲೂ ಸಹ ಸರ್ಕಾರ ಸಿದ್ಧ ಎಂದು ತಿಳಿಸಿದರು.

-ಮುಖ್ಯಮಂತ್ರಿಗಳು, ಅವಶೇಷಗಳಡಿ ಸಿಲುಕಿರುವ ಸಂತ್ರಸ್ತರ ಬಂಧುಗಳೊಂದಿಗೆ ಮಾತುಕತೆ ನಡೆಸಿ, ಸಾಂತ್ವನ ಹೇಳಿದರು. ಜಿಲ್ಲಾ ಆಸ್ಪತ್ರೆ ಮತ್ತು ಸತ್ತೂರಿನ ಎಸ್.ಡಿ.ಎಂ.ಆಸ್ಪತ್ರೆಗೆ ತೆರಳಿಗೆ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

-ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ನಡೆದ ಈ ಘಟನೆ ಆಘಾತಕಾರಿಯಾಗಿದೆ. ದುರಂತ ಸಂಭವಿಸಿದ ತಕ್ಷಣ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸುವ ಅಧಿಕಾರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವಹಿಸಲಾಗಿದೆ ಎಂದು ತಿಳಿಸಿದರು.

-ಪೌರಾಡಳಿತ ಸಚಿವರಾದ ಸಿ.ಎಸ್. ಶಿವಳ್ಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಹೆಚ್. ಕೋನರೆಡ್ಡಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕ ಪ್ರಸಾದ್ಅಬ್ಬಯ್ಯ , ಪೊಲೀಸ್ ಮಹಾ ನಿರ್ದೇಶಕ ಎಂ.ಎನ್. ರೆಡ್ಡಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಜಿಲ್ಲಾಧಿಕಾರಿ ದೀಪಾ ಚೋಳನ್, ಅಗ್ನಿಶಾಮಕದಳ ಮತ್ತು ತುರ್ತು ಸೇವೆಗಳ ಡಿಐಜಿ ರವಿಕಾಂತೇಗೌಡ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ್ ಉಪಸ್ಥಿತರಿದ್ದರು.

*********************************