ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ನವೀಕರಿಸಬಹುದಾದ ಇಂಧನ ಉತ್ಪಾದನೆ : ಮುಂಚೂಣಿಯಲ್ಲಿ ಕರ್ನಾಟಕ - ಮುಖ್ಯಮಂತ್ರಿ

(ಬೆಂಗಳೂರು), ಮೇ 21, 2019

-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂಟರ್ ನ್ಯಾಷನಲ್ ಸೋಲಾರ್ ಅಲಯನ್ಸ್ ನ ಸದಸ್ಯ ರಾಷ್ಟ್ರಗಳ ರಾಯಭಾರಿಗಳೊಂದಿಗಿನ ಸಭೆಯಲ್ಲಿ ಭಾಗವಹಿಸಿದ್ದರು.

-ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯವು ನವೀಕರಿಸಬಹುದಾದ ಮೂಲಗಳಿಂದ ಅತಿ ಹೆಚ್ಚು ವಿದ್ಯುತ್ ಉತ್ಪಾದಿಸುವ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗದೆ. ದಕ್ಷಿಣದ ರಾಜ್ಯಗಳಲ್ಲಿ ಸೋಲಾರ್ ನೀತಿ ರೂಪಿಸಿದ ಮೊದಲ ರಾಜ್ಯವೂ ನಮ್ಮದು. ಈ ನೀತಿಯನ್ವಯ 2021ರ ವೇಳೆಗೆ 6 ಸಾವಿರ ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಸೃಷ್ಟಿಯ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ತುಮಕೂರು ಜಿಲ್ಲೆಯ ಪಾವಗಡದಲ್ಲಿ 2000 ಮೆಗಾವ್ಯಾಟ್ ಸಾಮರ್ಥ್ಯದ ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

-ಮುಖ್ಯಮಂತ್ರಿಗಳು ರಾಜ್ಯ ವಿದ್ಯುತ್ ಉತ್ಪಾದನಾ ವಲಯ ಹಾಗೂ ಕೈಗಾರಿಕಾ ಅಭಿವೃದ್ಧಿಗಾಗಿ ಕೈಗೊಂಡಿರುವ ಉಪಕ್ರಮಗಳನ್ನು ವಿವರಿಸಿದರು.

-ಇಂಟರ್ನ್ಯಾಷನಲ್ ಸೋಲಾರ್ ಅಲಯನ್ಸ್ ನ ಮಹಾ ನಿರ್ದೇಶಕ ಉಪೇಂದ್ರ ತ್ರಿಪಾಠಿ ಪ್ರಾಸ್ತಾವಿಕವಾಗಿ ಮಾತನಾಡಿ ನವೀಕರಿಸಬಹುದಾದ ಇಂಧನ ವಲಯದಲ್ಲಿ ಪ್ರಶಸ್ತಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

-ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸ್ವಾಗತಿಸಿದರು. ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಈ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಮತ್ತಿತರ ಅಧಿಕಾರಿಗಳು, 40 ದೇಶಗಳ ರಾಯಭಾರಿಗಳು ಭಾಗವಹಿಸಿದ್ದರು.

*********************************