ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಭಿಕ್ಷೆ ಬೇಡಿ ತಾಯಿಯ ಪೋಷಣೆ ಮಾಡುತ್ತಿದ್ದ ಬಾಲಕಿ - ರಕ್ಷಣೆಗೆ ಜಿಲ್ಲಾಡಳಿತ ಕ್ರಮ

(ಬೆಂಗಳೂರು), ಮೇ 28, 2019

-ಕೊಪ್ಪಳ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬಾಲಕಿಯೊಬ್ಬಳು ಭಿಕ್ಷೆ ಬೇಡಿ ತಾಯಿಯನ್ನು ಪೋಷಿಸುತ್ತಿರುವ ಕುರಿತು ಪತ್ರಿಕೆಗಳಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿದ ಮುಖ್ಯಮಂತ್ರಿಗಳು ಆ ಮಹಿಳೆಯ ಹಾಗೂ ಬಾಲಕಿಯ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.

-ಅದರಂತೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಮಹಿಳೆಗೆ ಸೂಕ್ತ ಚಿಕಿತ್ಸೆ ಕೊಡಿಸಿ ಸ್ವಾಧಾರ ಕೇಂದ್ರಕ್ಕೆ ಸೇರಿಸಲು ಕ್ರಮಕೈಗೊಂಡಿದ್ದಾರೆ.

-ಮಹಿಳೆ ದುರುಗವ್ವಳ ಮಕ್ಕಳನ್ನು ಬಾಲಕಿಯರ ಬಾಲಮಂದಿರ, ಬಾಲಕರ ಬಾಲ ಮಂದಿರಕ್ಕೆ ದಾಖಲಿಸಿ ಶಿಕ್ಷಣ ಒದಗಿಸಲು ಕ್ರಮ ವಹಿಸಲಾಗಿದೆ.

-ಇತ್ತೀಚಿನ ದಿನಗಳಲ್ಲಿ ಸೋದರಿ ತಮ್ಮೊಂದಿಗೆ ಸಂಪರ್ಕದಲ್ಲಿ ಇರಲಿಲ್ಲ. ಪತ್ರಿಕೆಯಲ್ಲಿ ವರದಿ ನೋಡಿ ಕೊಪ್ಪಳಕ್ಕೆ ಆಗಮಿಸಿರುವುದಾಗಿ ಆಕೆಯ ಸೋದರ ಲಕ್ಷ್ಮಣ ತಿಳಿಸಿದ್ದು ಅವರನ್ನು ಮಕ್ಕಳ ಕಲ್ಯಾಣ ಸಮಿತಿ ಸಭೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.

*********************************