ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಯೋಜನೆಗಳ ಅನುಷ್ಠಾನ: ಮುಖ್ಯ ಕಾರ್ಯದರ್ಶಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

(ಬೆಂಗಳೂರು), ಜೂನ್ 01, 2019

-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೆಎಸ್ಎಫ್ಸಿ ಸಭಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ, ಪರಿಶೀಲನೆ ಕುರಿತು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರೊಂದಿಗೆ ಚರ್ಚೆ ನಡೆಸಿದರು.

-ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆ, ಆಯವ್ಯಯದಲ್ಲಿ ಘೋಷಿಸಿದ ಕಾರ್ಯಕ್ರಮಗಳನ್ನು ನಿಗದಿತ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

-ಈ ಕುರಿತು ಚರ್ಚಿಸಲು ಶೀಘ್ರವೇ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆಯುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.

-ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗಿದ್ದರೆ, ನಿಧಾನವಾಗುತ್ತಿದ್ದರೆ, ಇದಕ್ಕೆ ಕಾರಣಗಳನ್ನು ಅರಿತು, ಸಮಸ್ಯೆ ನಿವಾರಿಸುವಂತೆ ಹಾಗೂ ಈ ನಿಟ್ಟಿನಲ್ಲಿ ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸುವಂತೆ ಸೂಚಿಸಿದರು.

-ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ವಸತಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣದ ಗುಣಮಟ್ಟ ಖಾತರಿ ಪಡಿಸಲು ಹಾಗೂ ಶಾಲಾ ಕಾಲೇಜುಗಳ ಮೂಲಸೌಕರ್ಯಕ್ಕೆ ಆದ್ಯತೆ ನೀಡಲು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಆಂಗ್ಲ ಮಾಧ್ಯಮ ಶಾಲೆಗಳ ಪ್ರಾರಂಭದ ಕುರಿತ ವಿವರಗಳನ್ನು ಪಡೆದು, ಈ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಣ ದೊರಕುವಂತೆಯೂ ಖಾತರಿ ಪಡಿಸುವಂತೆ ಸೂಚಿಸಿದರು.

-ಅಂತೆಯೇ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುವಂತೆ ಸಲಹೆ ನೀಡಿದರು.

-ವಸತಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಅರ್ಹ ಫಲಾನುಭವಿಗಳಿಗೇ ಸೌಲಭ್ಯ ದೊರೆಯುವುದನ್ನು ಖಾತರಿ ಪಡಿಸಲು ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

-ನಗರ ಪ್ರದೇಶದಲ್ಲಿ ಮೂಲಸೌಕರ್ಯ, ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಬೇಕು. ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

-ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ ಇ.ವಿ. ರಮಣರೆಡ್ಡಿ, ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್ ಅವರು ಉಪಸ್ಥಿತರಿದ್ದರು.

*********************************