ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ರಾಜ್ಯದ ಐತಿಹಾಸಿಕ – ಪಾರಂಪರಿಕ ದೇವಾಲಯಗಳ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ಆದೇಶ

ಗೃಹ ಕಚೇರಿ ಕೃಷ್ಣಾ (ಬೆಂಗಳೂರು), ಜೂನ್ 07, 2019

-ಧಾರ್ಮಿಕ ದತ್ತಿ ಇಲಾಖೆ ಅಧೀನದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

-ಸಭೆಯಲ್ಲಿ ರಾಜ್ಯದ ಐತಿಹಾಸಿಕ ಹಾಗೂ ಪಾರಂಪರಿಕ ದೇವಾಲಯಗಳ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಮುಖ್ಯಮಂತ್ರಿಗಳು ಕೆಳಕಂಡ ಸೂಚನೆಗಳನ್ನು ನೀಡಿದರು.

-ಇತಿಹಾಸ ಪ್ರಸಿದ್ಧ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ 21 ಕೋಟಿ ರೂ. ಗಳ ಪ್ರಸ್ತಾವನೆ ಸಲ್ಲಿಸುವುದು.

-ಟಿ. ಟಿ.ಡಿ ಟ್ರಸ್ಟ್ ವತಿಯಿಂದ ರಾಮನಗರ ಜಿಲ್ಲೆಯಲ್ಲಿ ವೆಂಕಟೇಶ್ವರ ದೇವಸ್ಥಾನ ಹಾಗೂ ಸಮುದಾಯದ ಭವನ ನಿರ್ಮಾಣ ಕ್ಕೆ 15 ಎಕರೆ ಜಮೀನು ಗುರುತಿಸುವುದು.

-ಲೋಕೋಪಯೋಗಿ ಇಲಾಖೆ ವತಿಯಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯವನ್ನು 40 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಹಾಗೂ ದೇವಸ್ಥಾನದ ಮೆಟ್ಟಿಲುಗಳ ದುರಸ್ತಿ ಕಾರ್ಯವನ್ನು ಮಲೆ ಮಹದೇಶ್ವರ ಪ್ರಾಧಿಕಾರದ ವತಿಯಿಂದ ಕೈಗೊಳ್ಳುವುದು.

-ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಾಗೂ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸುವುದು.

-ತಿರುಮಲ ತಿರುಪತಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ 26 ಕೋಟಿ ರೂ. ವೆಚ್ಚದಲ್ಲಿ ಛತ್ರ ನಿರ್ಮಾಣ ಕಾರ್ಯವನ್ನು ಕೈಗೊಳ್ಳುವುದು.

-ಮುಂದಿನ ವರ್ಷದಲ್ಲಿ ತಲಕಾಡು ಪಂಚಲಿಂಗದರ್ಶನ ಆಚರಣೆ ನಡೆಯಲಿರುವುದರಿಂದ, ಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅವಶ್ಯವಿರುವೆಡೆ ಸೌಲಭ್ಯವನ್ನು ನಿರ್ಮಿಸಲು ಸೂಚನೆಗಳನ್ನು ಮುಖ್ಯಮಂತ್ರಿಗಳು ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ನೀಡಿದರು.

-ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆ ಚ್.ಡಿ.ರೇವಣ್ಣ, ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯಕ್, ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

*********************************